ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಮುರ್ಮು

168

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮೋದಿ ಸೇರಿದಂತೆ ಘಟಾನುಘಟಿ ನಾಯಕರೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.

ಸಂಸತ್ ಭವನದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ಮತ್ತು ಎನ್ ಡಿಎ ಆಡಳಿತವಿರುವ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!