ಎನ್ ಡಿಎಗೆ ಪೂರ್ಣ ಬಹುಮತ ಬರಲ್ಲ: ಸಿಎಂ ಸಿದ್ದರಾಮಯ್ಯ

65

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪೂರ್ಣಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧ ಇರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು,  400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿ ತಪ್ಪಿಸುವ ಕಾರ್ಯತಂತ್ರವಾಗಿದೆ. ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು.

ನಿರುದ್ಯೋಗ ಯಾಕೆ ಮಿತಿ ಮೀರಿದೆ? ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾಕೆ ಅನ್ಯಾಯವಾಗುತ್ತಿದೆ? ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲ ನರೇಂದ್ರ ಮೋದಿ ಉತ್ತರ ಹೇಳಲಿ ಎಂದು ಸರಣಿ ಪೋಸ್ಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!