ಆಕ್ಸಿಜನ್ ಕೊರತೆಗೆ ಕೇಂದ್ರದ ನಿರ್ಲಕ್ಷ್ಯ ಕಾರಣ

217

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ಕೇಂದ್ರದ ನಿರ್ಲಕ್ಷ್ಯತನವೇ ಕಾರಣವೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ ಕಾರಿದ್ದಾರೆ. ವಿಶ್ವದಲ್ಲಿಯೇ ಭಾರತ ಅತಿ ಹೆಚ್ಚು ಆಕ್ಸಿಜನ್ ಉತ್ಪಾದಿಸುತ್ತೆ. ಹೀಗಿದ್ರೂ ಕೊರತೆ ಉಂಟಾಗಲು ಕೇಂದ್ರ ಸರ್ಕಾರ ಕಾರಣ ಎಂದಿದ್ದಾರೆ.

ಕಳೆದ 6 ತಿಂಗಳಲ್ಲಿ 1.1 ಮಿಲಿಯನ್ ರೆಮೆಡಿಸಿವಿರ್ ರಫ್ತಾಗಿದೆ. ಜನವರಿಯಿಂದ ಮಾರ್ಚ್ ವರೆಗೆ 6 ಕೋಟಿ ಲಸಿಕೆ ರಫ್ತಾಗಿದೆ. ಇದರ ನಡುವೆ ಭಾರತದಲ್ಲಿ 3-4 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ದೇಶದ ಜನತೆಗೆ ಪ್ರಾಮುಖ್ಯತೆ ಕೊಡದೆ ಇರುವುದು ಸರ್ಕಾರದ ತಪ್ಪು ನಿರ್ಧಾರ, ಯೋಜನೆಯಿಲ್ಲದೆ ಲಸಿಕೆ ಕೊರತೆ ಕಾಣಿಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!