ಸಿಂದಗಿಯಲ್ಲಿ 3 ಕರೋನಾ ಕೇಸ್: 60ಕ್ಕೆ ಏರಿದ ಸೋಂಕಿತರ ಸಂಖ್ಯೆ

503

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿ ಹೊಸದಾಗಿ 3 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 2 ಪಟ್ಟಣದಲ್ಲಿ ಹಾಗೂ 1 ಬಳಗಾನೂರ ಗ್ರಾಮದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಇದುವರೆಗೂ ತಾಲೂಕಿನಲ್ಲಿ 60 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಪಟ್ಟಣದ 20ನೇ ವಾರ್ಡಿನ ಒಂದೇ ಕುಟುಂಬದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. 35 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳೆಯಲ್ಲಿ ಕೋವಿಡ್ 19 ಪತ್ತೆಯಾಗಿದೆ. ಇದೇ ರೀತಿ ಬಳಗಾನೂರು ಗ್ರಾಮದಲ್ಲಿ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರನ್ನ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸ 3 ಪ್ರಕರಣಗಳು ಸೇರಿದಂತೆ ಇಲ್ಲಿಯವರೆಗೆ 60 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದಂತೆ 56 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗ್ತಿರುವುದ್ರಿಂದ, ಜನರು ಎಚ್ಚರಿಕೆಯಿಂದ ಇರುವುದು ಎಲ್ಲರ ದೃಷ್ಟಿಯಿಂದ ಒಳ್ಳೆಯದು.




Leave a Reply

Your email address will not be published. Required fields are marked *

error: Content is protected !!