ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು: 500 ಕೋಟಿ ಮೀಸಲು

206

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಹೊಸ ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ವೈದ್ಯಕೀಯ ಖಾತೆ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ನೂತನ ಮೆಡಿಕಲ್ ಕಾಲೇಜಿಗೆ 500 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭಸಲಾಗುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆಗೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಇದರೊಂದಿಗೆ ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!