ಎಂಬಿಪಿ ಹೇಳಿಕೆ.. ಡಿಕೆಶಿ ಕನಸು ಭಗ್ನ?

124

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶನಿವಾರವಷ್ಟೇ ನೂತನ ಸರ್ಕಾರ ಜಾರಿಗೆ ಬಂದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ನಾಯಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಸಾಕಷ್ಟು ಜಪಾಪಟಿ ನಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕಾಂಗ್ರೆಸ್ ಹೈಕಮಾಂಡ್ ಸಂಧಾನ ನಡೆಸಿ 50:50 ಎಂದು ಹೇಳಿದ ಮೇಲೆ ಸಿದ್ದರಾಮಯ್ಯ ಸಿಎಂ ಆದರು ಎನ್ನಲಾಯಿತು.

ಈಗ ನೂತನ ಸಚಿವ ಎಂ.ಬಿ ಪಾಟೀಲ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿರಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ತಲಾ ಎರಡೂವರೆ ವರ್ಷ ಎಂದು ಯಾವುದೇ ಮಾತುಕತೆ ಆಗಿಲ್ಲ. ಲೋಕಸಭಾ ಚುನಾವಣೆ ಬಳಿಕ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ.ಬಿ ಪಾಟೀಲ ಹೇಳಿದ್ದು ಹೊಸ ಚರ್ಚೆ ಹುಟ್ಟು ಹಾಕಿದ್ದು, ಡಿ.ಕೆ ಶಿವಕುಮಾರ್ ಕನಸು ಮತ್ತೆ ಭಗ್ನವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.




Leave a Reply

Your email address will not be published. Required fields are marked *

error: Content is protected !!