ಇಂದಿನಿಂದ 3 ದಿನ ರಾಜ್ಯದಲ್ಲಿ ಭಾರೀ ಮಳೆ

392

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೆಲವು ಕಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಹಾವೇರಿ, ಬೆಳಗಾವಿ, ಕಲಬುರಗಿ, ಬೀದರನಲ್ಲಿ ಭರ್ಜರಿ ಮಳೆಯಾಗುವ ಸಂಭವ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನಲ್ಲಿಯೂ ಆಗಸ್ಟ್ 2ರ ತನಕ ಭಾರೀ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಒಳನಾಡಿನಲ್ಲಿಯೂ ಭಾರೀ ಮಳೆಯಾಗಬಹುದು. ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಭಾಗದಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ವರುಣನ ಅಬ್ಬರವಿರಲಿದ್ದು, ಜನರು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವುದು ಒಳ್ಳೆಯದು.




Leave a Reply

Your email address will not be published. Required fields are marked *

error: Content is protected !!