‘ಉ.ಕ’ದಲ್ಲಿ ಮುಂದಿನ 3 ದಿನ ಭಾರಿ ಮಳೆ: ಪ್ರವಾಹ ಭೀತಿ

262

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈಗಾಗ್ಲೇ ಸಾಕಷ್ಟು ಮಳೆಯಿಂದಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರು ಹೈರಾಣಾಗಿದ್ದಾರೆ. ವಿಜಯಪುರ, ಕಲಬುರಗಿ, ಬೆಳಗಾವಿ, ಬೀದರ, ಕೊಪ್ಪಳ, ರಾಯಚೂರು ಭಾಗದಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ ಜನರು ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ.

ಇದೀಗ ಅಕ್ಟೋಬರ್ 20ರಿಂದ 3 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ರಾಯಚೂರ, ಯಾದಗಿರಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಅಕ್ಟೋಬರ್ 19, 20ರಿಂದ ಮುಂದಿನ 3 ದಿನಗಳ ಕಾಲ ಭರ್ಜರಿಯಾಗಲಿದೆಯಂತೆ. ಅಂದಾಜು 65 ಮಿಲಿ ಮೀಟರ್ ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.




Leave a Reply

Your email address will not be published. Required fields are marked *

error: Content is protected !!