ಜು.27ರ ತನಕ ರಾಜ್ಯಾದ್ಯಂತ ಮಳೆ: 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

251

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಾರನ ರುದ್ರನರ್ತನ ಮುಂದುವರೆದಿದೆ. ಇದ್ರಿಂದಾಗಿ ನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೀಗಿರುವಾಗ ವರುಣನ ಆರ್ಭಟ ಜುಲೈ 27ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಂದೇ ದಿನದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 9 ಸಾವಿರ ಜನರನ್ನ ಸ್ಥಳಾಂತರಿಸಲಾಗಿದೆ. 8 ಕಡೆ ಭೂಕುಸಿತವಾಗಿದೆ. ಹೀಗಾಗಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಬೆಳಗಾವಿ, ಗದಗ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೆ ರೀತಿ ಸಿಲಿಕಾನ್ ಸಿಟಿಯಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!