ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ

172

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಫೋರ್ ಜಾಯ್ ಚಂಡಮಾರುತದಿಂದಾಗಿ ಈ ಬಾರಿ ರಾಜ್ಯದಲ್ಲಿ ಮುಂಗಾರು ಸಂಪೂರ್ಣ ಕೈಕೊಟ್ಟಿದೆ. ಇದರಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಳೆಯಿಲ್ಲದೆ ರೈತರ ಆಕಾಶದತ್ತ ನೋಡುವಂತಾಗಿದೆ. ಇದರ ನಡುವೆ ಖುಷಿಯ ವಿಚಾರ ಅಂದರೆ ಭಾನುವಾರ ರಾತ್ರಿ ರಾಜ್ಯದ ಹಲವು ಕಡೆ ಮಳೆ ಕಾಣಿಸಿಕೊಂಡಿದೆ. ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಹಾಸನ, ಮಂಡ್ಯ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!