ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ

267

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 3ರ ತನಕ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. 4 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೂಡಗಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಡ್ಯ, ಮೈಸೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!