ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಿಮಗ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರ ಸಂಬಂಧ ಕಾಂಗ್ರೆಸ್ ಆಡಳಿತ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಈಗಾಗ್ಲೇ ವರ್ಗಾವಣೆಯನ್ನು ಫೋನ್ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿದ್ದರಾಮಯ್ಯನವರ ಸರ್ಕಾರ ನಿಗಮ, ಮಂಡಳಿ ಹರಾಜಿಗೆ ಇಷ್ಟು ದಿನ ಕಾಯುತ್ತಿತ್ತು ಎಂದು ಟ್ವೀಟ್ ಮಾಡಿದೆ.
ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ, ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಸುರ್ಜೇವಾಲ್ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮವಾಗಿ ನಿಗಮ, ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ ಎಂದು ಬರೆದಿರುವ ಬಿಜೆಪಿ ಕಲೆಕ್ಷನ್ ಕೊಡಿ ನಿಗಮ, ಮಂಡಳಿ ಅಧಿಕಾರಿ ಪಡಿ ಎಂದು ಪೋಸ್ಟರ್ ರಿಲೀಸ್ ಮಾಡಿದೆ.