34 ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ

105

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾಕಷ್ಟು ಕುತೂಹಲ ಮೂಡಿಸಿದ್ದ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ತೆರೆ ಬಿದ್ದಿದೆ. 34 ಶಾಸಕರಿಗೆ ಅಧ್ಯಕ್ಷ ಸ್ಥಾನ ನೀಡಿ ಕಾಂಗ್ರೆಸ್ ಪಟ್ಟಿ ಪ್ರಕಟಿಸಿದೆ.

ಕೆ.ಎಂ ಶಿವಲಿಂಗೇಗೌಡ, ಎನ್.ಎ ಹ್ಯಾರಿಸ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಖನೀಜಾ ಫಾತಿಮಾ, ರಮೇಶ್ ಬಾಬು, ಎಂ.ರೂಪಕಲಾ, ರಾಜು ಕಾಗೆ, ಹೆಚ್.ವೈ ಮೇಟಿ ಸೇರಿದಂತೆ 34 ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನು ಕಾರ್ಯಕರ್ತರು, ಮುಖಂಡರಿಗೂ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೊಂಡು ಬರುತ್ತಿದ್ದರು. ಆದರೆ, ಈಗ ಬಂದಿರುವ ಪಟ್ಟಿಯಲ್ಲಿ ಶಾಸಕರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಮತ್ತೊಂದು ಪಟ್ಟಿಯಲ್ಲಿ ಮುಖಂಡರಿಗೆ, ಕಾರ್ಯಕರ್ತರಿಗೆ ಅವಕಾಶ ನೀಡಲಾಗುತ್ತಾ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!