ಇಂದು ವೀಕೆಂಡ್ ಕರ್ಫ್ಯೂ ನಿರ್ಧಾರ!

435

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಸಹ ಜಾರಿಗೆ ತರಲಾಗಿದೆ. ಈ ತಿಂಗಳು ಅಂತ್ಯದವರೆಗೂ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇದನ್ನು ತೆಗೆದು ಹಾಕಬೇಕು ಅನ್ನೋ ಕೂಗು ಜೋರಾಗಿದ್ದು, ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವರು, ತಜ್ಞರ ಸಮಿತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯ ನಂತರ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!