ನಿರ್ಭಯಾ ಕೇಸ್: ಕ್ಷಮಾದಾನ ಅರ್ಜಿ ತಿರಸ್ಕಾರ

342

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯೂಬ್ಬ ಸಲ್ಲಿಸಿದ್ದ ಕ್ಷಮಾಪಣ ಅರ್ಜಿಯನ್ನ ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಹೀಗಾಗಿ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.

2012ರಲ್ಲಿ ನಡೆದ ಘಟನೆ ಸಂಬಂಧ ಸಾಕಷ್ಟು ಹೋರಾಟ, ಪ್ರತಿಭಟನೆ ನಡೆದ್ವು. ದೇಶದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆದು ದೆಹಲಿ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿದೆ. ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋಗಿದ್ರು ಅಲ್ಲಿ ಸಹ ಪಟಿಯಾಲಾ ಕೋರ್ಟ್ ನೀಡಿದ್ದ ತೀರ್ಪು ಎತ್ತಿ ಹಿಡಿಯಲಾಯ್ತು. ಈ ಕುರಿತು ಅಪರಾಧಿಗಳಲ್ಲಿ ಒಬ್ಬನಾದ ಮುಖೇಶ ಸಿಂಗ್ ಎಂಬಾತ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಅದನ್ನ ತಿರಸ್ಕರಿಸಲಾಗಿದೆ.

ದೆಹಲಿಯ ಲೆಫ್ಟಿನೆಂಟ್ ಗೌರ್ವನರ್ ಕ್ಷಮಾದಾನ ಅರ್ಜಿಯನ್ನ ಕೇಂದ್ರ ಗೃಹ ಇಲಾಖೆಯಲ್ಲಿ ಗುರುವಾರ ಕಳಿಸಿದ್ರು. ಇದನ್ನ ರಾಷ್ಟ್ರಪತಿ ರಾಮನಾಥ ಕೋವಿಂದ ತಿರಸ್ಕರಿಸಿದ್ದಾರೆ. ಇದ್ರಿಂದಾಗಿ ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22ರಂದು ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ.




Leave a Reply

Your email address will not be published. Required fields are marked *

error: Content is protected !!