ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

250

ಪ್ರಜಾಸ್ತ್ರ ಸುದ್ದಿ

ಪಾಟ್ನಾ: ಬಿಹಾರ ಮುಖ್ಯಮಂತ್ರಿ  ಸ್ಥಾನಕ್ಕೆ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿಯೊಂದಗಿನ ಸಂಬಂಧ ಕಡಿದುಕೊಳ್ಳುವುದಾಗಿ ಘೋಷಿಸಿದ ಕೆಲ ಗಂಟೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದು ಅಲ್ಲದೇ 160 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರಂತೆ. ಮುಂದೆ ಜೆಡಿಯು ಹಾಗೂ ಆರ್ ಜೆಡಿ ದೋಸ್ತಿಯಲ್ಲಿ ಸರ್ಕಾರ ರಚನೆಯಾಗುತ್ತಾ ಅನ್ನೋ ಕುತೂಹಲವಿದೆ. ಈ ಮೂಲಕ ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ದೇಶದಲ್ಲಿ ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು ಸರ್ವನಾಶ ಮಾಡುವುದಕ್ಕೆ ಮುಂದಾಗಿದೆ ಎಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.




Leave a Reply

Your email address will not be published. Required fields are marked *

error: Content is protected !!