ಬ್ರೇಕಿಂಗ್ ನ್ಯೂಸ್: 7 ರಿಂದ 9ನೇ ತರಗತಿ ವಿದ್ಯಾರ್ಥಿಗಳೆಲ್ಲ ಪಾಸ್

376

ಬೆಂಗಳೂರು: 1 ರಿಂದ 6ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನ ರದ್ದು ಮಾಡಲಾಗಿತ್ತು. ಇದೀಗ ಅದೇ ರೀತಿ 7 ರಿಂದ 9ನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನ ಪಾಸ್ ಮಾಡಿ ಆದೇಶಿಸಲಾಗಿದೆ.

ಕರೋನಾ ವೈರಸ್ ಮಹಾಮಾರಿಯಿಂದಾಗಿ ಶಿಕ್ಷಣ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದ್ದು, 7 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ. ಅವರು ನೇರವಾಗಿ ಮುಂಬಡ್ತಿ ಕೊಟ್ಟು ಶಿಕ್ಷಣ ಇಲಾಖೆ ಆದೇಶಿಸಲಾಗಿದೆ. 7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಷರತ್ತು ಇಲ್ಲದೆ ಪಾಸ್. ಆದ್ರೆ, 9ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗ್ಲೇ ನಡೆದಿರುವ ಪರೀಕ್ಷೆಗಳ ಅಂಕಗಳನ್ನ ನೋಡಿಕೊಂಡು ಪಾಸ್ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಸುರೇಶಕುಮಾರ ಮಾತ್ನಾಡಿದ್ದು, ಹಿಂದಿನ ಪರೀಕ್ಷೆಯ ಫಲಿತಾಂಶ ಆಧರಿಸಿ ಗ್ರೇಡಿಂಗ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ಏಪ್ರಿಲ್ 14 ರ ನಂತರ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಫೇಸ್ ಬುಕ್ ನಲ್ಲಿ ಲೈವ್ ಗೆ ಬಂದು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ


TAG


Leave a Reply

Your email address will not be published. Required fields are marked *

error: Content is protected !!