ರಾಜ್ಯದಲ್ಲಿ ಲಾಕ್ ಡೌನ್ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ರೂಪಾಂತರ ಓಮೈಕ್ರಾನ್ ವೈರಸ್ ಗೆ ಸಂಬಂಧಿಸಿದಂತೆ ಎಲ್ಲೆಡೆ ಕಟ್ಟೆಚ್ಚರಿಕೆ ವಹಿಸಲಾಗುತ್ತಿದೆ. ಗಡಿ ಭಾಗಗಳಲ್ಲಿ ಬಿಗಿ ಭದ್ರತೆ ವಹಿಸಲಾಗುತ್ತಿದೆ. ಅಂತಾರಾಷ್ಟ್ರೀಯ ವಿಮಾನದಗಳಲ್ಲಿ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಇದೆಲ್ಲದರ ನಡುವೆ ಮತ್ತೆ ಲಾಕ್ ಡೌನ್ ಅನ್ನೋ ಮಾತುಗಳು ಕೇಳಿ ಬರುತ್ತಿದ್ದು, ಅದಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ತರುವ ಪ್ರಶ್ನೆಯೇ ಇಲ್ಲ. ಊಹಾಪೋಹಕ್ಕೆ ಆಸ್ಪದ ಕೊಡದೆ ಸಹಜ ಜನಜೀವನ ನಡೆಯಲಿ ಎಂದರು. ಸಂಘ, ಸಂಸ್ಥೆಗಳನ್ನು ಜನರನ್ನು ಸೇರಿಸುವಾಗ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದರು.

ಡೆಲ್ಟಾ ಸ್ಟ್ರೈನ್ ನಲ್ಲಿ ಕಸ್ಟರ್ ಆಗುತ್ತಿದೆ. ಎರಡು ಹಂತದಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಧಾರವಾಡದ ಎಸ್ ಡಿಎಂ ಕಾಲೇಜಿನಲ್ಲಿ 4 ಸಾವಿರ ಜನರ ತಪಾಸಣೆ ನಡೆಸಲಾಗಿದೆ. ಏಳು ದಿನಗಳ ನಂತರ ಎಲ್ಲರನ್ನು ಮತ್ತೆ ತಪಾಸಣೆ ಮಾಡಲಾಗುವುದು. ಇನ್ನು ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!