9, 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ

268

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಯ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟದ ಜೊತೆಗೆ ನೀಡುತ್ತಿದ್ದ ಮೊಟ್ಟೆಯನ್ನು 1ರಿಂದ 2 ಮಾಡಲಾಗಿದೆ. ವಾರದಲ್ಲಿ 2 ದಿನ ಪ್ರತಿ ಮಗುವಿಗೆ 2 ಮೊಟ್ಟೆ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಇದೀಗ ಇದನ್ನು 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ.

ಹೌದು, ಇನ್ನು ಮುಂದೆ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳು ಸಹ ವಾರದಲ್ಲಿ 2 ದಿನ ಎರಡೆರಡು ಮೊಟ್ಟೆಗಳನ್ನು ತಿನ್ನಬಹುದು. ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೇಸ್ ಬುಕ್ ನಲ್ಲಿ ಬರೆದುಕೊಳ್ಳುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!