ನೂಪುರ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು: ಸುಪ್ರೀಂ ಕೋರ್ಟ್

241

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪ್ರವಾದಿ ಮಹ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ನೂಪುರ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೇಶದ ವಿವಿಧಡೆ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಎಲ್ಲವನ್ನು ದೆಹಲಿಗೆ ವರ್ಗಾಯಿಸಬೇಕೆಂದು ಆಕೆ ಪರ ವಕೀಲರು ಕೇಳಿದರು. ಈ ವೇಳೆ ತರಾಟೆಗೆ ತೆಗೆದುಕೊಂಡು ಸುಪ್ರೀಂ ಕೋರ್ಟ್, ನೂಪುರ ಶರ್ಮಾ ಹೇಳಿಕೆಯಿಂದ ದೇಶದ ಭದ್ರತೆಗೆ ದಕ್ಕೆಯಾಗಿದೆ. ಹೀಗಾಗಿ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ.

ಶರ್ಮಾ ಪರ ವಕೀಲರನ್ನ ತರಾಟೆಗೆದುಕೊಂಡು, ಅರ್ಜಿಯನ್ನು ತಿರಸ್ಕರಿಸಲಾಯಿತು. ಈ ಬಗ್ಗೆ ಹೈಕೋರ್ಟ್ ನಲ್ಲಿ ಮೊದಲು ಅರ್ಜಿ ಸಲ್ಲಿಸಲಿ ಎಂದು ತಿಳಿಸಲಾಯಿತು. ದೇಶದಲ್ಲಿ ನಡೆದಿರುವ ಘಟನೆಗಳಿಗೆ ನೂಪುರ್ ಶರ್ಮಾ ಹೇಳಿಕೆ ಕಾರಣವೆಂದು ಹೇಳಿ ಚಳಿ ಬಿಡಿಸಲಾಯಿತು. ಹೀಗಾಗಿ‌ ಉಚ್ಛಾಟಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿತು.




Leave a Reply

Your email address will not be published. Required fields are marked *

error: Content is protected !!