ವೃದ್ಧೆಯ ಭೀಕರ ಕೊಲೆ: ಆರೋಪಿ ಬಂಧನ

167

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 78 ವರ್ಷದ ವೃದ್ಧೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಓರ್ವ ಆರೋಪಿಯನ್ನು ಕೆ.ಆರ್ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಸರ್ಗ ಲೇಔಟ್ ನ ಸರೋಜಮ್ಮ(78) ಕೊಲೆಯಾದ ವೃದ್ಧೆ.

ಸರೋಜಮ್ಮ ವಾಸವಿದ್ದ ಮನೆಯಿಂದ ದುರ್ವಾಸನೆ ಬಂದ ಹಿನ್ನಲೆಯಲ್ಲಿ ಭಾನುವಾರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ವೃದ್ಧೆಯನ್ನು ಕೊಲೆ ಮಾಡಿ ಮೃತದೇಹ ತುಂಡರಿಸಿ ಡ್ರಮ್ ನಲ್ಲಿ ಮುಚ್ಚಿಟ್ಟು ಹೋಗಿದ್ದಾರೆ.

ಎರಡು ದಿನಗಳ ಹಿಂದೆ ವೃದ್ಧೆಯ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶ್ವಾನದಳೊಂದಿಗೆ ಸ್ಥಳ ಪರಿಶೀಲಿಸಿದ್ದಾರೆ. ಆಗ ಶ್ವಾನ ಹತ್ತಿರದ ಮನೆಯೊಂದರ ಮುಂದೆ ಹೋಗಿ ನಿಂತಿದೆ. ಮನೆಯಲ್ಲಿದ್ದ ಆರೋಪಿ ಹೊರ ಬರುತ್ತಿದ್ದಂತೆ ನಾಯಿ ಆತನ ಬಳಿ ಹೋಗಿ ನಿಂತಿದೆ. ಆತನನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸರೋಜಮ್ಮಗೆ ಒಬ್ಬ ಮಗ, ಮಗಳು ಇದ್ದಾರೆ. ಮಗ ಪ್ರತ್ಯೇಕವಾಗಿ ವಾಸವಾಗಿದ್ದಾನೆ. ಸರೋಜಮ್ಮ ಮಗಳೊಂದಿಗೆ ವಾಸವಾಗಿದ್ದರು. ಆಸ್ತಿ ವಿಚಾರವಾಗಿ ಸಂಬಂಧಿಕರು ಅಥವ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಅನುಮಾನ ಮೂಡಿದ್ದು, ತನಿಖೆಯಿಂದ ಹೊರ ಬರಲಿದೆ. ಈ ಘಟನೆಯಿಂದ ಸುತ್ತಲಿನ ಜನ ಭಯಭೀತರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!