ತುರ್ತು ಸಭೆ ಕರೆದ ಸಿಎಂ

250

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಇಬ್ಬರಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ತುರ್ತು ಸಭೆ ಕರೆದಿದ್ದಾರೆ. ಕೋವಿಡ್ 19 ನಿಯಂತ್ರಣ ಸಂಬಂಧ ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆಯಲ್ಲಿ ಚರ್ಚಿಸಲಾಗುತ್ತೆ.

ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಇಲಾಖೆ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೆಐಎಬಿ ಕೋವಿಡ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರು, ಕಂದಾಯ ಹಾಗೂ ಆರೋಗ್ಯ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!