ಜನತೆ ಸಹಕಾರ ನೀಡಿದರೆ ಲಾಕ್ ಡೌನ್ ಇಲ್ಲ: ಸಿಎಂ ಬೊಮ್ಮಾಯಿ

457

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕರೋನಾ ರೂಪಾಂತರ ತಳಿ ಓಮಿಕ್ರಾನ್ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಈಗಾಗ್ಲೇ ಜನವರಿ 7ರ ತನಕ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇದೀಗ ರಾಜ್ಯದಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗುವುದು. ಜನರು ಸಹಕಾರ ನೀಡಿದರೆ ಲಾಕ್ ಡೌನ್ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇನ್ನೆರಡು ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಮುಂಬೈನಲ್ಲಿ ತೆಗೆದುಕೊಂಡ ಮಾದರಿಯಲ್ಲಿ ಕಟ್ಟುನಿಟ್ಟನ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚಿಸಲಾಗುವುದು. ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಲಾಕ್ ಡೌನ್ ಬಗ್ಗೆ ಕಂದಾಯ ಸಚಿವ ಆರ್.ಅಶೋಕ ಮಾತನಾಡಿದ್ದಾರೆ. ಜನರು ಸಹಕಾರ ನೀಡಿದರೆ ಲಾಕ್ ಡೌನ್ ಇಲ್ಲ. ಆ ಅರ್ಥದಲ್ಲಿ ಅವರು ಹೇಳಿದ್ದಾರೆ ಎಂದರು.

ವಿಜಯಪುರ ಜಿಲ್ಲೆ ಸೇರಿದಂತೆ ಇತರೆ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಅಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಬಹುದು. ಆದರೆ, ಜನರ ಆರೋಗ್ಯದ ದೃಷ್ಟಿಯಿಂದ ಇದು ಅನಿವಾರ್ಯ ಎಂದರು.




Leave a Reply

Your email address will not be published. Required fields are marked *

error: Content is protected !!