ಪದವಿ ವಿದ್ಯಾರ್ಥಿಗಳ ಆನ್ಲೈನ್ ಕ್ಲಾಸ್ ಶುರು

313

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ಪದವಿ ವಿದ್ಯಾರ್ಥಿಗಳ ಆನ್ಲೈನ್ ಕ್ಲಾಸ್ ಶುರುವಾಗಲಿವೆ. ಕರೋನಾ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ಧವಾಗಿದ್ದು, ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರ ಶೈಕ್ಷಣಿಕ ಚಟುವಟಿಕೆಗೆ ಅವಕಾಶ ನೀಡಿದೆ.

ಸೆಪ್ಟೆಂಬರ್ 1ರಿಂದ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳ ಆನ್ಲೈನ್ ಕ್ಲಾಸ್ ಶುರುವಾಗಲಿವೆ. ಅಕ್ಟೋಬರ್ 1ರಿಂದ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರು ಆಗಬೇಕಿದೆ. ನಾಳೆಯಿಂದ ಆನ್ಲೈನ್ ಪಾಠದ ಜೊತೆಗೆ ಶೈಕ್ಷಣಿಕ ಚಟುವಟಿಕೆಗೂ ಅವಕಾಶ ನೀಡಲಾಗಿದೆ.

ಇನ್ನು ಯುಜಿಸಿ ಮಾರ್ಗಸೂಚಿಯಂತೆ ಸೆಪ್ಟೆಂಬರ್ 30ರೊಳಗೆ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸೆಪ್ಟೆಂಬರ್ 30ರ ತನಕ ಶಾಲಾ-ಕಾಲೇಜುಗಳು ತೆರೆಯಬಾರದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.




Leave a Reply

Your email address will not be published. Required fields are marked *

error: Content is protected !!