ಜಾತಿ ಗಣತಿ ವರದಿಗೆ ಕೈ ನಾಯಕರ ವಿರೋಧ

93

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂತರಾಜ್ ಆಯೋಗದ ವರದಿ ಫೆಬ್ರವರಿ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಸಲ್ಲಿಸಿದ್ದಾರೆ. ಇದಕ್ಕೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಕೆಲ ಕೈ ನಾಯಕರು ತಮ್ಮ ವಿರೋಧ ಮುಂದುವರೆಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿನ ಲಿಂಗಾಯತ, ಒಕ್ಕಲಿಗ ಶಾಸಕರು, ಸಚಿವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗ ಸಲ್ಲಿಸಿರುವ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲವೆಂದು ಮಾಜಿ ಸಚಿವ, ಶಾಸಕ ಶಾಮನೂರ ಶಿವಶಂಕರಪ್ಪ, ಶಾಸಕ ವಿನಯ್ ಕಲಕರ್ಣಿ ವಿರೋಧ ವ್ಯಕ್ತಪಡಿಸಿದ್ದಾರೆ.

ಮನೆ ಮನೆಗೆ ಭೇಟಿ ನೀಡದೆ ಮಾಡಿರುವ ಸಮೀಕ್ಷೆಯನ್ನು ಸಮಾಜ ಒಪ್ಪುವುದಿಲ್ಲ. ಈ ವಿಚಾರದಲ್ಲಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹೇಳಿದ್ದಾರೆ.

ವರದಿ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಇದನ್ನು ನಮ್ಮ ಸಮಾಜ ಒಪ್ಪುವುದಿಲ್ಲ. ಲಿಂಗಾಯತ, ಒಕ್ಕಲಿಗ ಸಮುದಾಯದಲ್ಲಿ 100ಕ್ಕೂ ಹೆಚ್ಚು ಉಪಜಾತಿಗಳಿಗೆ. ಹೀಗಾಗಿ ಒಳಮೀಸಲಾತಿ ಕೇಳಲಾಗುತ್ತಿದೆ ಎಂದು ಶಾಸಕ ವಿನಯ್ ಕಲಕರ್ಣಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!