ಸಿಂದಗಿ ಹತ್ತಿರ ಉರುಳಿ ಬಿದ್ದ ಲಾರಿ

409

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಸಕ್ಕರೆ ತುಂಬಿಕೊಂಡು ಹೊರಟಿದ್ದ ಲಾರಿಯೊಂದು ರಸ್ತೆ ಬದಿ ನಿಂತಿದ್ದಾಗ ಉರುಳಿ ಬಿದ್ದ ಘಟನೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮನ್ನಾಪುರ ಮಾರ್ಗದಿಂದ ಹೊರಟಿದ್ದ ಲಾರಿ ಉರುಳಿ ಬಿದ್ದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಕಳೆದ ರಾತ್ರಿ ಈ ಘಟನೆ ನಡೆದಿದೆಯಂತೆ. ಹ್ಯಾಂಡ್ ಬ್ರೇಕ್ ಹಾಕದೆ ಇರುವ ಕಾರಣ ಲಾರಿ ಉರುಳಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಆದರೆ, ಘಟನೆಗೆ ನಿಜವಾದ ಕಾರಣ ತಿಳಿದು ಬಂದಿಲ್ಲ. ಎಲ್ಲಿಂದ ಎಲ್ಲಿಗೆ ಹೊರಟಿತ್ತು ಅನ್ನೋದು ಸೇರಿದಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!