ಭಾರೀ ಭದ್ರತೆಯೊಂದಿಗೆ ಬಂಗಾಳದಲ್ಲಿ ಮತ ಎಣಿಕೆ

100

ಪ್ರಜಾಸ್ತ್ರ ಸುದ್ದಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದಲ್ಲಿ ನಡೆದ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಹೀಗಾಗಿ ಸಾಕಷ್ಟು ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. 22 ಜಿಲ್ಲೆಗಳ 339 ಕಡೆ ಮತ ಎಣಿಕೆ ನಡೆಯುತ್ತಿದೆ.

ಮತ ಎಣಿಕೆ ಕೇಂದ್ರದ ಸುತ್ತ ಯಾವುದೇ ಹಿಂಸಾತ್ಮಕ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾ, ಪಂಚಾಯತ್ ಸಮಿತಿ, ಗ್ರಾಮ ಪಂಚಾಯ್ತಿಗಳ 73,887 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಆದರೆ, ಈ ವೇಳೆ ಸಾಕಷ್ಟು ಹಿಂಸಾತ್ಮಕ ಘಟನೆಗಳು ನಡೆದು 15 ಜನರು ಪ್ರಾಣ ಕಳೆದುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!