ಪಾದರಾಯನಪುರ ಘಟನೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ

328

ಬೆಂಗಳೂರು: ಕಳೆದ ರಾತ್ರಿ ಪದರಾಯನಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಮಾತ್ನಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಸಿಎಂ ನಿವಾಸದಲ್ಲಿ ನಿನ್ನೆ ತಡರಾತ್ರಿಯವರೆಗೂ ನಡೆದ ಚರ್ಚೆಯಲ್ಲಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ಪ್ರಚೋದನೆ ಇತ್ತಾ? ಇದರ ಹಿಂದೆ ಯಾರ ಕೈವಾಡವಿದೆ? ಇದು ಪೂರ್ವನಿಯೋಜಿತ ಘಟನೆಯೇ ಅನ್ನೋದರ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಇನ್ನು ಆಶಾ ಕಾರ್ಯಕರ್ತೆಯರಿಗೆ ಭದ್ರತೆ ನೀಡಬೇಕು. ಗಲಾಟೆ ನಡೆಯುವ ಸಾಧ್ಯತೆಯಿರುವ ಜಾಗಗಳಲ್ಲಿ ಹೆಚ್ಚಿನ ಸಿಬ್ಬಂದಿ ನೇಮಿಸುವಂತೆ ಸೂಚಿಸಿದ್ದು, ಘಟನೆ ಸಂಬಂಧ ವರದಿ ನೀಡುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ.

ಘಟನೆ ಹಿನ್ನೆಲೆ

ನಿನ್ನೆ ರಾತ್ರಿ ಆಶಾ ಕಾರ್ಯಕರ್ತೆಯರು ಪಾದರಾಯನಪುರಕ್ಕೆ ಕರೋನಾ ಸೋಂಕಿನ ತಪಾಸಣೆಗೆ ಹೋಗಿದ್ದಾರೆ. ಆಗ ಕೆಲ ಕಡಿಗೇಡಿಗಳು ಇವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಮತ್ತೊಮ್ಮೆ ಇಲ್ಲಿಗೆ ಬಂದರೆ ನೋಡಿ ಎಂದು ಆವಾಜ್ ಹಾಕಿದ್ದಾರೆ. ಹೀಗಾಗಿ ಸ್ವಲ್ಪದರಲ್ಲಿಯೇ ಆಶಾ ಕಾರ್ಯಕರ್ತೆಯರು ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.

ಈ ಘಟನೆ ಸಂಬಂಧ ಜೆ.ಜೆ ನಗರ ಠಾಣೆ ಪೊಲೀಸ್ರು ಈಗಾಗ್ಲೇ 54 ಜನರನ್ನ ಬಂಧಿಸಿ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಘಟನೆ ಹಿಂದಿನ ರಹಸ್ಯ ತಿಳಿಯಲು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 353, 307, ಎನ್ ಡಿಎಂಎ 353, 332, 324 ಹಾಗೂ 201 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!