ಪಾಕ್ ಮಾಜಿ ಪ್ರಧಾನಿ ಮುಷರಫ್ ನಿಧನ

159

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ದುಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಫರ್ವೇಜ್ ಮುಷರಫ್(70) ಭಾನುವಾರ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದುಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಈ ಬಗ್ಗೆ ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ. ಮುಷರಫ್ ನಿಧನಕ್ಕೆ ಪಾಕ್ ಸೇರಿದಂತೆ ಇತರೆ ದೇಶಗಳ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

1999ರಲ್ಲಿ ಸೇನಾ ದಂಗೆಯ ಬಳಿಕ 10ನೇ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸೇನೆಯಲ್ಲಿದ್ದ ಮುಷರಫ್ ಸಿಜೆಸಿಎಸ್ಸಿ ಆಗಿ, 7ನೇ ಉನ್ನತ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಮುಂದೆ ಅವರ ಆಡಳಿತದಲ್ಲಿಯೇ ಸೇನಾ ಪಡೆಯ ಬಿಸಿಯನ್ನು ಎದುರಿಸಬೇಕಾಯಿತು.




Leave a Reply

Your email address will not be published. Required fields are marked *

error: Content is protected !!