ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರ: 7 ಜನರ ವಿಚಾರಣೆ ಎಂದ ಸಿಎಂ

133

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಹಾಕಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ವಿಧಾನಸಭೆ ಕಲಾಪದಲ್ಲಿ ಗದ್ದಲ ನಡೆಯಿತು. ವಿಪಕ್ಷಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಸಿಎಂ ಇದಕ್ಕೆ ಉತ್ತರ ನೀಡಿದ್ದಾರೆ.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗ್ಲೇ 7 ಜನರನ್ನು ವಿಚಾರಣೆ ಮಾಡಲಾಗಿದೆ. ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದ ನಿಜವಾಗಿದ್ದರೆ ಅಂತವರನ್ನು ರಕ್ಷಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ದೇಶಭಕ್ತಿಯ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ. ಅವರಿಗಿಂತ 100 ಪಟ್ಟು ದೇಶಭಕ್ತರು ಇದ್ದೇವೆ. 1925ರಲ್ಲೇ  ಅಸ್ತಿತ್ವಕ್ಕೆ ಬಂದ ಆರ್ ಎಸ್ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. ಆರ್ ಎಸ್ಎಸ್ ಸ್ಥಾಪಕರಾದ ಕೇಶವ್ ಹೆಡಗೇವಾರ್, ಸರಸಂಘಚಾಲಕ ಗೋಳ್ವಳ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ? ಯಾವತ್ತೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!