ಸಂಸತ್ ಬಜೆಟ್ ಅಧಿವೇಶನ ಹಿನ್ನಲೆ ಸರ್ವಪಕ್ಷಗಳ ಸಭೆ

103

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಅರ್ಜುನ್ ರಾಮ್ ಮೇಘವಾಲ್ ಸರ್ಕಾರದ ಪರ ಭಾಗವಹಿಸಿದ್ದರು. ಹಲವು ಪಕ್ಷಗಳ ನಾಯಕರು ಹಾಜರಿದ್ದರು.

ಜನವರಿ 31ರಿಂದ ಫೆಬ್ರವರಿ 9ರ ತನಕ ಬಜೆಟ್ ಅಧಿವೇಶನ ನಡೆಯಲಿದೆ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿವೇಶನದ ಆರಂಭದ ಭಾಷಣ ಮಾಡಲಿದ್ದಾರೆ.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಶಿವಸೇನೆ, ಟಿಡಿಪಿ, ಜೆಡಿಯು, ಡಿಎಂಕೆ, ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!