ಡಿಸಿ ಕಚೇರಿಯಲ್ಲಿ ಪಿಡಿಒ ಆತ್ಮಹತ್ಯೆಗೆ ಯತ್ನ

96

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಿಡಿಒವೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದ ಪಿಡಿಒ ಆಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಜಾಗಕ್ಕೆ ಮತ್ತೊಬ್ಬರನ್ನು ನಿಯೋಜಿಸಲಾಗಿದೆ. ಆದ್ರೆ, ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಫೆಬ್ರವರಿಯಲ್ಲಿ ಹುದ್ದೆ ನೀಡಬಹುದು ಎಂದುಕೊಂಡಿದ್ದರು. ಆಗಿಲ್ಲ. ಈಗ ಚುನಾವಣೆ ಕರ್ತವ್ಯದಲ್ಲಿ ನಿಯೋಜಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇವರ ಪತ್ನಿ ಬೆಳ್ತಂಗಡಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ, ಜಿ.ಪಂ ಸಿಇಒ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!