ಫೋನ್ ಕದ್ದಾಲಿಕೆ ಪ್ರಕರಣ: ಕಾಂಗ್ರೆಸ್ ಪ್ರತಿಭಟನೆ

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಸಂಬಂಧ ವಿಧಾನಸೌಧದ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗ್ತಿದೆ.

ಕಾಂಗ್ರೆಸ್ ನಾಯಕರು ರಾಜಭವನ ಮುತ್ತಿಗೆ ಹಾಕಲು ಪ್ರಯತ್ನಿಸಿದ್ರು. ಆದ್ರೆ, ಅದಕ್ಕೆ ಅವಕಾಶ ಸಿಗದ ಕಾರಣ ಗಾಂಧೀಜಿ ಪ್ರತಿಮೆ ಎದುರು ಪ್ರತಿಭಟನೆ ನಡೆಸ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಹಿರಿಯ ನಾಯಕರಾದ ಹೆಚ್.ಕೆ ಪಾಟೀಲ, ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ರಮೇಶಕುಮಾರ, ಎಸ್.ಆರ್ ಪಾಟೀಲ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!