ಹಾಸನ ಮೂಲದ ಸಂಸದ ಮಂಗಳಸೂತ್ರಕ್ಕೆ ಕುತ್ತು ತಂದಿದ್ದು ನೋಡಿ ಮೋದಿಯವರೇ: ಕಾಂಗ್ರೆಸ್

86

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಕುಮಾರಸ್ವಾಮಿಯವರೇ ನೀವು ತೋರಿಸಿ ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್ ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಗಾಢ ಮೌನವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ ಎಂದು ಕಿಡಿ ಕಾರಲಾಗಿದೆ.

ಇನ್ನು ಪ್ರಧಾನಿ ಮೋದಿ ವಿರುದ್ಧ ಹರಿಹಾಯಲಾಗಿದೆ. ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು ನೋಡಿ ಮೋದಿಯವರೇ. ಹಾಸನ ಮೂಲದ ಬಿಜೆಪಿ ಬೆಂಬಲಿತ ಸಂಸದನಲ್ಲವೇ? ಇದು ಮಹಿಳೆಯರ ಮಂಗಲಸೂತ್ರ ಪಾವಿತ್ರ್ಯತೆಗೆ ಕುತ್ತು ತಂದಿದ್ದು ಎಂದು ನಿಮಗೆ ಅನಿಸುವುದಿಲ್ಲವೇ? ನಿಮಗೆ ಮಹಿಳೆಯರ ಘನತ, ಮಂಗಳಸೂತ್ರ ಪಾವಿತ್ರ್ಯತೆಯ ಬಗ್ಗೆ ನೈಜ ಕಾಳಜಿ ಇದ್ದಿದ್ದೇ ಆದರೆ ನಿಮ್ಮ ಮೈತ್ರಿಕೂಟದ ಕರ್ಮಕಾಂಡದ ಬಗ್ಗೆ ಕ್ಷಮೆ ಕೇಳಿ ಎಂದು ಇನ್ನೊಂದು ಟ್ವೀಟ್ ನಲ್ಲಿ ಕೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!