ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

219

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಅತಿಯಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಈಗಾಗ್ಲೇ ಲೀಟರ್ ಗೆ 100 ರೂಪಾಯಿ ದಾಟಿದೆ. ಡೀಸೆಲ್ ನೂರರ ಸಮೀಪ ಬಂದಿದೆ. ದೇಶದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಪೆಟ್ರೋಲ್ 100 ರೂಪಾಯಿ ದಾಟಿದ್ದು, ಡೀಸೆಲ್ ನೂರರ ಸಮೀಪ ಬಂದಿರುವುದು. ಇದನ್ನ ಖಂಡಿಸಿ ದೇಶ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ.

ಜೂನ್ 11ರಂದು ದೇಶ್ಯಾದ್ಯಂತ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ನಡೆಸಲು ಮುಂದಾಗಿದೆ. ಕಳೆದ ವರ್ಷ ಲೀಟರ್ ಗೆ 74 ರೂಪಾಯಿ ಇದ್ದ ಪೆಟ್ರೋಲ್ 100 ರೂಪಾಯಿ ದಾಟಿದೆ. ಇದನ್ನ ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!