ಪಿಎಫ್ಐ ಸಂಘಟನೆ ನಿಷೇಧದ ಬಗ್ಗೆ ಸಿಎಂ ಏನಂದರು?

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರ ಗೃಹ ಇಲಾಖೆ ಪಿಎಫ್ಐ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ ದೇಶದ ಕಾನೂನು, ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಸಂಘಟನೆ. ವಿದೇಶಗಳಿಂದ ಬರುವ ಆಜ್ಞೆಯ ಪ್ರಕಾರ ಹಲವಾರು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದಿದ್ದಾರೆ.

ಈ ಸಂಘಟನೆಯನ್ನು ಐದು ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷೇಧಿಸಿರುವುದನ್ನು ಸ್ವಾಗತಿಸುತ್ತೇನೆ. ಮಹತ್ವದ ಕ್ರಮವನ್ನು ತೆಗೆದುಕೊಂಡು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!