ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ವಾಪಸ್

249

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅನುಮತಿ ಇಲ್ಲಿದೆ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ಎಲ್ಲಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಷೇಧವನ್ನು ವಾಪಸ್ ಪಡೆದಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧವನ್ನು ವಾಪಸ್ ಪಡೆಯಲಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದವು. ಸಾರ್ವಜನಿಕರು ಸೇರಿದಂತೆ ವಿಪಕ್ಷಗಳು ಸರ್ಕಾರದ ಶೇಕಡ 40ರಷ್ಟು ಕಮಿಷನ್ ಭ್ರಷ್ಟಾಚಾರ ಮುಚ್ಚಿಹಾಕುವ ಸಲುವಾಗಿ ಇದನ್ನು ತಂದಿದೆ. ಈ ಮೂಲಕ ಭ್ರಷ್ಟರ ಪರ ನಿಂತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದೀಗ ಆದೇಶ ಹಿಂಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!