ದೊಡ್ಡ ಸಮಾವೇಶಕ್ಕೆ ಚಿಂತನೆ: ಬಿಎಸ್ವೈ

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಲ್ಲೇಶ್ವರಂದಲ್ಲಿರುವ ಜಗನ್ನಾಥ ಭವನದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರೆಯಿಸಿ ದೊಡ್ಡ ಸಮಾವೇಶ ಮಾಡುವ ಚಿಂತನೆ ಇದೆ ಎಂದರು.

ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಎಲ್ಲ ಹಿರಿಯ ನಾಯಕರು ಆಶೀರ್ವಾದ ಮಾಡಿದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸುವ ವಿಶ್ವಾಸವಿದೆ. ಇನ್ನು ಇನ್ನೋರ್ವ ಮಾಜಿ ಸಿಎಂ ಬೊಮ್ಮಾಯಿ ಮಾತನಾಡಿ, ಸೂಕ್ತ ಸಮಯದಲ್ಲಿ ವಿಜಯೇಂದ್ರಗೆ ಹೈಕಮಾಂಡ್ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!