ಪಿಎಂ ಕಿಸಾನ್ ಯೋಜನೆಯ 10ನೇ ಕಂತು ಇಂದು ಬಿಡುಗಡೆ

466

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದು ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 10ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಪ್ರಧಾನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಈ ಯೋಜನೆಯ ಮೂಲಕ 10 ಕೋಟಿ ರೈತರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ. ಇದುವರೆಗೂ 1.6 ಲಕ್ಷ ಕೋಟಿ ಹಣವನ್ನು ರೈತರಿಗೆ ವರ್ಗಾಯಿಸಲಾಗಿದೆ. ವರ್ಷಕ್ಕೆ 6 ಸಾವಿರ ರೂಪಾಯಿಯಂತೆ ತಲಾ 2 ಸಾವಿರ ರೂಪಾಯಿ ರೈತರ ಖಾತೆಗೆ ಹಾಕಿಕೊಂಡು ಬರಲಾಗುತ್ತಿದೆ.

ಇದರ ಜೊತೆಗೆ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಎಫ್ ಪಿಒಗಳೊಂದಿಗೆ ಸಂವಾದ ನಡೆಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!