ಪ್ರಜಾಸ್ತ್ರ ಸುದ್ದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 70ನೇ ಹುಟ್ಟು ಹಬ್ಬದ ಸಂಭ್ರಮ. ಬಿಜೆಪಿ ನಾಯಕರು, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದ್ದಾರೆ. ಅದೆ ರೀತಿ ರಾಜಕೀಯ ಗಣ್ಯರು ಸಹ ಪ್ರಧಾನಿಗೆ ಶುಭ ಹಾರೈಸಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಯುವ ನಾಯಕ ರಾಹುಲ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಟ್ವೀಟರ್ ಮೂಲಕ ಶುಭ ಕೋರಿದ್ದಾರೆ.