ಪ್ರಧಾನಿ ಬರುವ ರಸ್ತೆಯಲ್ಲಿನ ಶಾಲಾ, ಕಾಲೇಜುಗಳಿಗೆ ರಜೆ

171

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಎರಡು ದಿನ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರ ಸಲುವಾಗಿ ಕೆಲವು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅದು ಪ್ರಧಾನಿ ಹಾದು ಹೋಗುವ ರಸ್ತೆಯಲ್ಲಿರುವ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥನಾರಾಯಣ್ ತಿಳಿಸಿದ್ದು, ಐಐಎಸ್ಸಿ, ಗೊರಗುಂಟೆಪಾಳ್ಯ, ಸಿಎಂಟಿಐ, ರಿಂಗ್ ರಸ್ತೆ, ಡಾ.ರಾಜ್ ಕುಮಾರ್ ಮೆಮೋರಿಯಲ್ ಫ್ಲೈಓವರ್, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಟಾಕೀಸ್, ಯಶವಂತಪುರ ಮತ್ತು ಜಕ್ಕೂರು ಏರೋಡ್ರೋಮ್ ಮಾರ್ಗದ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮೋದಿ ಬಂದು ಹೋಗಲಿ ಬೇಡ ಎಂದವರು ಯಾರು? ಅದು ಅವರ ಪಕ್ಷಕ್ಕೆ ಸಂಬಂಧಿಸಿದ್ದು. ವಿದ್ಯಾರ್ಥಿಗಳೇನು ಭಯೋತ್ಪಾದಕರಾ? ಶಾಲಾ, ಕಾಲೇಜುಗಳಿಗೇಕೆ ರಜೆ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಪ್ರಧಾನಿ ಭದ್ರತಾ ಕಾರಣಕ್ಕೆ ರಜೆ ಘೋಷಿಸಲಾಗಿದೆ ಎಂದಿದೆ.


TAG


Leave a Reply

Your email address will not be published. Required fields are marked *

error: Content is protected !!