ಕೋವಿಡ್ 19: ಎಲ್ಲ ಸಿಎಂಗಳ ಜೊತೆ ಮೋದಿ ವಿಡಿಯೋ ಸಂವಾದ

337

ನವದೆಹಲಿ: ಕರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಎರಡನೇ ಬಾರಿಗೆ ವಿಡಿಯೋ ಸಂವಾದ ನಡೆಸಿದ್ರು. ರಾಜ್ಯದ ಸಿಎಂಗಳ ಜೊತೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ, ಕರೋನಾ ತಡೆಗಟ್ಟುವಿಕೆ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಿ ಎಂದಿದ್ದಾರೆ.

ದೆಹಲಿಯ ತಬ್ಲಿಕ್ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರನ್ನ ಪತ್ತೆ ಮಾಡಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದಾರೆ. ಮಹಾರಾಷ್ಟ್ರ, ಕೇರಳ ಹಾಗೂ ಉತ್ತರ ಪ್ರದೇಶದಲ್ಲಿ ಕರೋನಾ ಪ್ರಕರಣ ಹೆಚ್ಚಾಗಿದ್ದು, ಸೂಕ್ತ ಪ್ರತಿಬಂಧಕ ಕ್ರಮಗಳನ್ನ ಪಾಲಿಸುವಂತೆ ಸೂಚಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆ ಕುರಿತು ಸಿಎಂಗಳಿಗೆ ಸೂಚನೆ ನೀಡಿದ್ರು. ಈ ವೇಳೆ ಸಿಎಂ ಬಿ.ಎಸ್ ಯಡಿಯೂರಪ್ಪ, ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್ ಚವ್ಹಾಣ, ಆಂಧ್ರ ಸಿಎಂ ಜಗ್ಗನಮೋಹನ ರೆಡ್ಡಿ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಸೇರಿದಂತೆ ಎಲ್ಲ ರಾಜ್ಯಗಳ ಸಿಎಂಗಳು ಪಿಎಂ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!