ಕೊಡೇಕಲ್ ನಲ್ಲಿ ಪ್ರಧಾನಿ ಮೋದಿ ಮೇನಿಯಾ

106

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಯಾದಗಿರಿ ಹಾಗೂ ಕಲಬುರಗಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ ಹಕ್ಕುಪತ್ರ ವಿತರಣೆ ಸಂಬಂಧ ಪ್ರಧಾನಿ ಮೋದಿ ಗುರುವಾರ ಆಗಮಿಸಿದ್ದಾರೆ. ಈಗ ಸುಕ್ಷೇತ್ರ ಕೊಡೇಕಲ್ ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕ್ಯಾಪ್ಟರ್ ನಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!