ಯೋಧರಿಗೆ ಸಿಹಿ ಹಂಚಿದ ಪ್ರಧಾನಿ

316

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ವರ್ಷವೂ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನ ಆಚರಣೆ ಮಾಡಿದ್ದಾರೆ. ಸೈನಿಕರಿಗೆ ಸಹಿ ಹಂಚುವ ಮೂಲಕ ದೀಪಾವಳಿ ಹಬ್ಬದ ಶುಭ ಕೋರಿದ್ರು.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೇನಾ ಪಡೆಯೊಂದಿಗೆ ದೀಪಾವಳಿ ಆಚರಿಸಿದ್ರು. ನಿಯಂತ್ರಣ ರೇಖೆ ಉದ್ದಕ್ಕೂ ನಿಂತಿದ್ದ ಯೋಧರೊಂದಿಗೆ ಮಾತ್ನಾಡುವ ಮೂಲಕ ಅವರೊಂದಿಗೆ ಒಂದಿಷ್ಟು ಸಮಯ ಕಳೆದ್ರು. 2014ರಿಂದ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸ್ತಿದ್ದಾರೆ. ಇನ್ನು ಕಣಿವೆ ನಾಡಿಗೆ ನೀಡಿದ್ದ ವಿಶೇಷ ಸ್ಥಾನ ರದ್ದು ಮಾಡಿದ ಬಳಿಕ ಇದೆ ಮೊದಲ ಬಾರಿಗೆ ಪಿಎಂ ಇಲ್ಲಿಗೆ ಭೇಟಿ ನೀಡಿದ್ರು.




Leave a Reply

Your email address will not be published. Required fields are marked *

error: Content is protected !!