508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ಚಾಲನೆ

206

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಅಮೃತ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ದೇಶದ ವಿವಿಧ ರಾಜ್ಯಗಳ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ಮೋದಿ ಭಾನುವಾರ ಚಾಲನೆ ನೀಡಿದರು. ವರ್ಚ್ ವಲ್ ಸಭೆಯ ಮೂಲಕ ಹೊಸ ಕಾಮಗಾರಿಗೆ ಚಾಲನೆ ಕೊಟ್ಟರು.

27 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 508 ರೈಲು ನಿಲ್ದಾಣಗಳ ನವೀಕರಣ ಕಾರ್ಯ ಆರಂಭವಾಗಲಿದೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ರೈಲ್ವೆ ಇಲಾಖೆಗೆ ಇದೊಂದು ಹೆಗ್ಗಳಿಕೆ. ರೈಲು ನಿಲ್ದಾಣಗಳು ಪುನರ್ ಅಭಿವೃದ್ಧಿಗೆ ಅಡಿಗಲ್ಲು ಹಾಕಲಾಗುತ್ತಿದೆ. ಇದು 25 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ ಅಂತಾ ತಿಳಿಸಿದರು.

ದೇಶದ 1,300 ರೈಲು ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ. ಇದರ ಮೊದಲ ಹಂತವಾಗಿ 508 ರೈಲು ನಿಲ್ದಾಣಗಳ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆಧುನಿಕ ತಂತ್ರಜ್ಞಾನ, ವಿನ್ಯಾಸದ ಜೊತೆಗೆ ಸ್ಥಳೀಯ ಕಲೆ, ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪ ಶೈಲಿಯಲ್ಲಿ ನಿಲ್ದಾಣಗಳ ನವೀಕರಣ ಕೆಲಸ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!