ಪ್ರಜಾಸ್ತ್ರ ಸುದ್ದಿ
ಅಹಮದಾಬಾದ್: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಇಂದು ಸಂಜೆ ಅಹಮದಾಬಾದ್ ಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.