ಪ್ರಧಾನಿ ಮೋದಿ ಆಗಮನ: ಬೆಳಗಾವಿಯಲ್ಲಿ ಪಿಯುಸಿ ಪರೀಕ್ಷೆಯೇ ಮುಂದೂಡಿಕೆ

151

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಪ್ರಧಾನಿ ಮೋದಿ ಅವರು ಫೆಬ್ರವರಿ 27 ಸೋಮವಾರ ಮಧ್ಯಾಹ್ನ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಪಿಎಂ ಕಿಸಾನ್ ಯೋಜನೆಯ 13ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಜೊತೆಗೆ ರೋಡ್ ಶೋ, ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ಪ್ರಥಮ ಪಿಯುಸಿ ಪರೀಕ್ಷೆಯನ್ನೇ ಮುಂದೂಡಲಾಗಿದೆ.

ಹೌದು, ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಸಹ ಹೊರಡಿಸಲಾಗಿದೆ. ಫೆಬ್ರವರಿ 27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಾರ್ಚ್ 6ನೇ ತಾರೀಖಿಗೆ ಮುಂದೂಡಿ ಆದೇಶ ಹೊರಡಿಸಲಾಗಿದೆ. ಇದಕ್ಕೆ ನೀಡಿರುವ ಕಾರಣ ಪ್ರಧಾನಿ ಆಗಮನದಿಂದ ವಿದ್ಯಾರ್ಥಿಗಳಿಗೆ ಆಗುವ ತೊಂದರೆ ಎಂದು ತಿಳಿಸಲಾಗಿದೆ.

ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ಟೀಕಿಸಿದೆ. ಪ್ರಧಾನಿ ಹೇಳುವುದು ಪರೀಕ್ಷಾ ಪೇ ಚರ್ಚಾ. ಮಾಡುವುದು ಪರೀಕ್ಷಾ ಮೇ ಆಕ್ರಮಣ್ ಎಂದು ಟ್ವೀಟ್ ಮಾಡಿದೆ. ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ ಎಂದು ಟ್ವೀಟ್ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!