ಮೋದಿ 2 ದಿನ ಕರ್ನಾಟಕ ಭೇಟಿಯ ಅಪ್ಡೇಟ್ಸ್ ಇಲ್ಲಿದೆ…

351

ತುಮಕೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾದ್ಮೇಲೆ ಮೊದಲ ಬಾರಿಗೆ ಪ್ರಧಾನಿ ಬರ್ತಿದ್ದಾರೆ. ಸಿದ್ಧಗಂಗಾ ಮಠದ ಖಾಸಗಿ ಕಾರ್ಯಕ್ರಮಕ್ಕಾಗಿ ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಬರ್ತಿದ್ದಾರೆ. ಪಿಎಂ ಆದ್ಮೇಲೆ ತುಮಕೂರಿಗೆ ಬರ್ತಿರುವುದು ನಾಳೆಯದು ಮೂರನೇ ಭೇಟಿಯಾಗಿದೆ.

ಮೊದಲು ನಡೆದಾಡುವ ದೇವರೆಂದು ಖ್ಯಾತಿ ಹೊಂದಿದ್ದ ಸಿದ್ಧಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ. ಇದಾದ್ಮೇಲೆ ಸಿದ್ದಗಂಗಾ ಶ್ರೀಗಳಿಗೆ ಸಂಬಂಧಿಸಿದ ವಸ್ತು ಸಂಗ್ರಾಲಯ ಕಟ್ಟಡದ ಶಂಕುಸ್ಥಾಪನೆ ಮಾಡಲಿದ್ದಾರೆ. ಇಲ್ಲಿ ಕೆಲವು ಆಯ್ದ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇದಾದ್ಮೇಲೆ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಧ ರಾಜ್ಯಗಳ 28 ಮಾದರಿ ರೈತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಬೆಂಗಳೂರಿಗೆ ಆಗಮಿಸಿ, ರಕ್ಷಣಾ ಸಂಶೋಧನಾ ಸಂಸ್ಥೆ ಡಿಆರ್ ಡಿಒಗೆ ಭೇಟಿ ನೀಡಲಿದ್ದಾರೆ.

ಶುಕ್ರವಾರ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿ ಮಾತ್ನಾಡಲಿದ್ದಾರೆ. ಅಲ್ಲಿಂದ ಸೀದಾ ನವದೆಹಲಿಗೆ ಪಯಣ ಬೆಳಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ತುಮಕೂರು ಹಾಗೂ ಬೆಂಗಳೂರಿನಲ್ಲಿ ಭಾರೀ ಬಿಗಿ ಭದ್ರತೆಯನ್ನ ಒದಗಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!