ಕಾನ್ಸ್ಟೇಬಲ್ ಹುದ್ದೆಗೆ ವಯೋಮಿತಿ ಹೆಚ್ಚಳ

120

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಆಕಾಂಕ್ಷಿಗಳ ಸಾಕಷ್ಟು ಹೋರಾಟ, ಪ್ರತಿಭಟನೆ, ವಿಪಕ್ಷಗಳ ಟೀಕೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ, ಹುದ್ದೆಗಳ ನೇಮಕಾತಿಯ ವಯೋಮಿತಿಯನ್ನು ಹೆಚ್ಚಳ ಮಾಡಲಾಗಿದೆ.

ಈಗಾಗ್ಲೇ ನಿಗದಿ ಪಡಿಸಿದ ವಯೋಮಿತಿಗಿಂತ ಒಂದು ಬಾರಿಗೆ ಅನ್ವಯವಾಗುವಂತೆ 2 ವರ್ಷ ಹೆಚ್ಚಳ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ನಗದಿಯಾಗಿರುವ 1,591 ಸಿವಿಲ್ ಹಾಗೂ 3, 484 ಡಿಎಆರ್ ಹುದ್ದೆಗಳಿಗೆ ನಿಗದಿ ಪಡಿಸಿರುವ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಕ್ಕೆ ಹೆಚ್ಚಿಸಿ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ.

ಸಿವಿಲ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಎಸ್ಸಿ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 29 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 27 ವರ್ಷ, ಬುಡಕಟ್ಟು ಅಭ್ಯರ್ಥಿಗಳಿಗೆ 32 ವರ್ಷ ನಿಗದಿಗೊಳಿಸಲಾಗಿದೆ. ಸಿಎಆರ್‌ ಮತ್ತು ಡಿಎಆರ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಗರಿಷ್ಠ ವಯೋಮಿತಿ ಪರಿಶಿಷ್ಟಜಾತಿ ಮತ್ತು ಇತರೆ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 29 ವರ್ಷ, ಇತರೆ ಅಭ್ಯರ್ಥಿಗಳಿಗೆ 27 ವರ್ಷ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷ ನಿಗದಿಗೊಳಿಸಲಾಗಿದೆ.

ಇದರ ಜತೆಗೆ ಅರ್ಜಿ ಸಲ್ಲಿಸಲು ಸಿವಿಲ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನವೆಂಬರ್‌ 28 ಮತ್ತು ಸಿಎಆರ್‌ ಹಾಗೂ ಡಿಎಆರ್‌ ಹುದ್ದೆಗಳಿಗೆ ನವೆಂಬರ್‌ 30ರ ವರೆಗೆ ವಿಸ್ತರಿಸಲಾಗಿದೆ. ನಿಗದಿತ ಶುಲ್ಕ ಪಾವತಿಸಲು ಡಿಸೆಂಬರ್‌ 2ರ ವರೆಗೆ ಅವಧಿ ವಿಸ್ತರಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!