ತೀರ್ಥಹಳ್ಳಿಯಲ್ಲಿ ಪೊಲೀಸ್ ಶವ ಪತ್ತೆ

260

ಪ್ರಜಾಸ್ತ್ರ ಸುದ್ದಿ

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಶವ ಪತ್ತೆಯಾಗಿದೆ. ಪೂರ್ಣೇಶ್ ಅನ್ನೋ ಪೊಲೀಸ್ ಕಾನ್ಸ್ ಟೇಬಲ್ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.

ಮದ್ಯ ವ್ಯಸನಿಯಾಗಿದ್ದ ಪೂರ್ಣೇಶ್ ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಕೆಲಸ ನಿರ್ವಹಿಸಿದ್ದರು. ಕೆಲ ದಿನಗಳ ಹಿಂದೆ ಕೆಲಸದಿಂದ ವಜಾಗೊಂಡಿದ್ದರು. ಇವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!